HomeLatest Newsಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳಿಗೆ ಜಾಮೀನು ಮಂಜೂರು: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಿಂಬಾಲಕರೊಂದಿಗೆ ರೋಡ್ ಶೋ ನಡೆಸಿದ...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳಿಗೆ ಜಾಮೀನು ಮಂಜೂರು: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಿಂಬಾಲಕರೊಂದಿಗೆ ರೋಡ್ ಶೋ ನಡೆಸಿದ ಕಿರಾತಕರು

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ಮೂಲಕ ಪಟ್ಟಣದ ಬೀದಿ ಬೀದಿಗಳಲ್ಲಿ ಮೆರೆದಾಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಆರೋಪಿಗಳು ಮೆರವಣಿಗೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೂರು ದಿನಗಳ ಹಿಂದೆ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಹಾವೇರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆ ಆರೋಪಿಗಳನ್ನು ಗುರುತಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಪ್ರಕರಣದ 7 ಆರೋಪಿಗಳಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆರೋಪಿ ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲನವರ್, ಮಹಮ್ಮದ್ ಸಾದಿಕ್, ಶೋಯಿಬ್ ಮುಲ್ಲಾ, ತೌಸಿಪ್ ಚೋಟಿ, ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರ ಜ.8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದ 19 ಆರೋಪಿಗಳಲ್ಲಿ 12 ಆರೋಪಿಗಳು ಹತ್ತು ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular