ವಿಜಯಪುರ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ನಾಯಕರ ವಿರುದ್ಧವೂ ಇಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವರ ಹೆಸರು ಇದೆ ಎಂದು ತಿಳಿದುಬಂದಿದೆ.
ಇಡಿ ಚಾರ್ಜ್ ಶೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದ ಕೊಲ್ಹಾರದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನಾವು ಹಣ ಕೊಟ್ಟಿದ್ದೇವೆ. ಅದರಲ್ಲಿತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
ನಾನು 25 ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದೇನೆ. ನನ್ನ ಸಹೋದರ 25 ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ನಾವು ಚೆಕ್ ನೀಡಿಲ್ಲ, ನಾವು ದುಡಿದು ಸಂಪಾದನೆ ಮಾಡಿದ ಹಣವನ್ನು ದೇಣಿಗೆ ನೀಡಿದ್ದೇವೆ. ಅದರಲ್ಲಿ ತಪ್ಪೇನಿದೆ? ನಮ್ಮ ಪಕ್ಷದ ಪತ್ರಿಕೆ ಅದು ಹಾಗಾಗಿ ನಾವು ಹಣ ಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ? ಎಂದು ಕೇಳಿದ್ದಾರೆ.