ವಿಟ್ಲ : ಪತ್ನಿ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕನ್ಯಾನದ ಮಿತ್ತನಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಪತ್ನಿಯ ಸೀಮಂತದ ದಿನವೇ ಸತೀಶ್ ಕುಸಿದು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಸತೀಶ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೀಮಂತದ ಸಂಭ್ರಮದಲ್ಲಿದ್ದ ಕುಟುಂಬ ತೀವ್ರ ಶೋಕದಲ್ಲಿ ಮುಳುಗಿದೆ.
You Might Also Like
TAGGED:ಪತಿ ಸಾವು