ಮುಂಬೈ: ಬೆಳಗಾವಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮೇ 18ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೇ 27ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿದೆ.
ಮೇ 18ರಂದು ರಾತ್ರಿ 10 ಗಂಟೆಗೆ ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಲು ಎಂಬಿಬಿಎಸ್ ವಿದ್ಯಾರ್ಥಿನಿ ನಿರ್ಧರಿಸಿ ಅವರ ಅಪಾರ್ಟ್ಮೆಂಟ್ ಗೆ ತೆರಳಿದ್ದಾಳೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಸ್ನೇಹಿತರು ಸಂತ್ರಸ್ತೆಗೆ ಮತ್ತು ಬರಿಸುವ ಪಾನಿಯ ನೀಡಿದ್ದಾರೆ. ಆಕೆ ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ನಂತರ ಸಂತ್ರಸ್ತೆ ಬೆಳಗಾವಿಯಲ್ಲಿದ್ದ ಪೋಷಕರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗಿದೆ.