HomeLatest Newsಇತಿಹಾಸ ಪುಟ ಸೇರಿದ ರಾಮನಗರ ಜಿಲ್ಲೆ, 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದು ಹೆಸರು ಬದಲಿಸಿ ಸರ್ಕಾರದ...

ಇತಿಹಾಸ ಪುಟ ಸೇರಿದ ರಾಮನಗರ ಜಿಲ್ಲೆ, ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಹೆಸರು ಬದಲಿಸಿ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.

ಇದರೊಂದಿಗೆ ಇನ್ನು ಮುಂದೆ ರಾಮನಗರ ಜಿಲ್ಲೆ ಇತಿಹಾಸ ಪುಟ ಸೇರಿದಂತಾಗಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆಯ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

2024ರ ಜುಲೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಣಯ ಕೈಗೊಂಡಿತ್ತು. ಇದಕ್ಕೆ ನಿರಾಕ್ಷೇಪಣಾ ಪತ್ರ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಕೇಂದ್ರ ಗೃಹ ಇಲಾಖೆ ಈ ಪ್ರಸ್ತಾವನೆ ತಿರಸ್ಕರಿಸಿ ಯಥಾಸ್ಥಿತಿ ಉಳಿಸಿಕೊಳ್ಳಲು ಸೂಚಿಸಿತ್ತು. ಹೀಗಿದ್ದರೂ ಗುರುವಾರ ಸಂಚಿವ ಸಂಪುಟ ಸಭೆಯಲ್ಲಿ ಭೂಮಿ, ಭೂ ಕಂದಾಯ, ಜಿಲ್ಲೆಗಳ ಮರುನಾಮಕರಣ ವಿಷಯ ಸಂವಿಧಾನಾತ್ಮಕವಾಗಿ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದೆ. ಹೀಗಾಗಿ ಕೇಂದ್ರದ ಒಪ್ಪಿಗೆ ಬೇಕಿಲ್ಲ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿತ್ತು. ಅಂತೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular