ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆ ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮೇ 24, 25 ರಂದು 2 ದಿನ ಭಾರಿ ಮಳೆಯಾಗಲಿದೆ. ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಮೇ 24 ರಂದು ಮುಂದಿನ 24 ಗಂಟೆವರೆಗೆ ಭಾರಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳವರೆಗೆ (ಮೇ 24 ಮತ್ತು 25) ಆರೆಂಜ್ ಅಲರ್ಟ್ ಜಾರಿಯಲ್ಲಿರುತ್ತದೆ.ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಕೊಪ್ಪಳ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
You Might Also Like
TAGGED:ವಾಯುಭಾರ ಕುಸಿತ