ನವದೆಹಲಿ : ಬಿಜೆಪಿ ನಾಯಕನೋರ್ವ ಮಹಿಳೆ ಜೊತೆ ನಡು ರಸ್ತೆಯಲ್ಲೇ ಸೆಕ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲಾಗಿದೆ.
ಹೌದು, ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಮಧ್ಯಪ್ರದೇಶದ ಮಂದ್ಸೌರ್ ನ ಲಾಲ್ ಧಕಾಡ್ ದೆಹಲಿ ಮುಂಬೈ ಲೇನ್ ಎಕ್ಸ್ ಪ್ರೆಸ್ ವೇಯಲ್ಲಿ ಮಹಿಳೆ ಜೊತೆ ಸೆಕ್ಸ್ ನಡೆಸಿದ್ದಾರೆ ಎನ್ನಲಾಗಿದೆ. ವೀಡಿಯೋದಲ್ಲಿ ಕಾಣಿಸುವಂತೆ ಮಹಿಳೆ ಸಂಪೂರ್ಣವಾಗಿ ಬೆತ್ತಲಾಗಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲಾಗಿದೆ.
ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಹೇಳಿದೆ.

