ಬೆಂಗಳೂರು: ರಾಜ್ಯದಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ದೈನಂದಿನ ಊಟದ ಭತ್ಯೆಯನ್ನು 200 ರೂ.ನಿಂದ 300 ರೂ.ಗೆ ಹೆಚ್ಚಳ ಮಾಡಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಕಳಪೆ ಗುಣಮಟ್ಟದ ಊಟ ನೀಡಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಅಲ್ಲದೆ, ಸರ್ಕಾರ ನೀಡುವ 200 ರೂಪಾಯಿ ಭತ್ಯೆ ಸಾಕಾಗುತ್ತಿಲ್ಲ ಎನ್ನುವ ಆಕ್ಷೇಪ ಕೂಡ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಅನುಮೋದನೆ ಪಡೆದುಕೊಂಡ ಪೊಲೀಸ್ ಇಲಾಖೆ ಹಬ್ಬ, ಚುನಾವಣೆ ಸೇರಿದಂತೆ ಇತರೆ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಪ್ರತಿ ಪೊಲೀಸ್ ಸಿಬ್ಬಂದಿಗೆ ಒಂದು ದಿನಕ್ಕೆ 300 ರೂ. ಊಟದ ಭತ್ಯೆ ನಿಗದಿಪಡಿಸಿ ಶುಕ್ರವಾರ ಆದೇಶ ಹೊರಡಿಸಿದೆ.