ಬೆಳಗಾವಿ : ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ ಸ್ವಾಮೀಜಿಯೋರ್ವ ಇದೀಗ ಅಂದರ್ ಆಗಿದ್ದಾನೆ.
ಹೌದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ ಸ್ವಾಮೀಜಿ ತನ್ನ ಜೊತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
You Might Also Like
TAGGED:ಸ್ವಾಮೀಜಿ ಅರೆಸ್ಟ್