ಬೆಂಗಳೂರು : ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯ ದರವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಗುಣಮಟ್ಟದ ಆರೋಗ್ಯಕರ ಆಹಾರವನ್ನು ಪೂರೈಸುವ ದೃಷ್ಟಿಯಿಂದ ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ (Food Allowance) ದರವನ್ನು ರೂ.200/-ರಿಂದ ರೂ.300/-ಗಳಿಗೆ ಹೆಚ್ಚಿಸಿ ಆದೇಶಿಸಿರುತ್ತದೆ.
ಉಲ್ಲೇಖಿತ ಸರ್ಕಾರದ ಆದೇಶವನ್ನು ಮಾಹಿತಿ ಹಾಗೂ ಮುಂದಿನ ಕ್ರಮಕ್ಕಾಗಿ ಈ ಪತ್ರಕ್ಕೆ ಲಗತ್ತಿಸಿ ಕಳುಹಿಸಿಕೊಡಲಾಗಿದೆ.




You Might Also Like
TAGGED:ರಾಜ್ಯ ಸರ್ಕಾರ