ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದು, ಒಂದೇ ದಿನದಲ್ಲಿ 19 ಕೇಸ್ ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ 35 ಸಕ್ರಿಯ ಪ್ರಕರಣಗಳಿದ್ದು, ಅವುಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆಯಿಂದ ಬಳಲುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದು ಹಾಗೂ ಕೈಗಳ ನೈರ್ಮಲ್ಯ ಕಾಪಾಡುವುದು ಮುಖ್ಯ ಎಂದು ಗೈಡ್ ಲೈನ್ ನಲ್ಲಿ ಸೂಚಿಸಲಾಗಿದೆ.
ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಲಾಗಿದೆ.
ಸಾರ್ವಜನಿಕರು ನಿಯಮಿತವಾಗಿ ಹ್ಯಾಂಡ್ ಸ್ಯಾನಟೈಸರ್ ಬಳಸಬೇಕು.
ಉಸಿರಾಟದ ಸಮಸ್ಯೆಯಿರುವವರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್-19 ಪರೀಕ್ಷೆಗಳನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಣ್ದು ಆರೋಗ್ಯ ಇಲಾಖೆ ತಿಳಿಸಿದೆ.