ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಧಾರಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಮೂರು ದಿನಗಲ ಕಾಲ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 26ರವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡ್ದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ಮೈಸೂರು, ಮೈಸೂರು, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಮುಂದುವರೆಯಲಿದೆ.