ಮೈಸೂರು : ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಕೆರೆಯಲ್ಲಿ ನಡೆದಿದೆ.
ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದಕ್ಕೆ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಎಂದು ಗುರುತಿಸಲಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಮೂವರು ಆತ್ಮಹತ್ಯೆ