ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 27ರವರೆಗೆ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಇಂದಿನಿಂದ ಮೇ 27ರವರೆಗೆ ಮಳೆ ಮತ್ತಷ್ಟು ಹೆಚ್ಚಲಿದೆ ಎಂದು ತಿಳಿಸಿದೆ.
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಶಕ್ತಿ ಚಂಡಮಾರುತ ಕೂಡ ಕರಾವಳಿ ಭಾಗಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.