HomeLatest Newsಅಸ್ಸಾಂನಲ್ಲಿ ಆಘಾತಕಾರಿ ಘಟನೆ: ಜೈಲು ಆವರಣದಲ್ಲೇ ಮಾನಸಿಕ ಅಸ್ವಸ್ಥೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಸಿಬ್ಬಂದಿ...

ಅಸ್ಸಾಂನಲ್ಲಿ ಆಘಾತಕಾರಿ ಘಟನೆ: ಜೈಲು ಆವರಣದಲ್ಲೇ ಮಾನಸಿಕ ಅಸ್ವಸ್ಥೆ ಮೇಲೆ ಗ್ಯಾಂಗ್ ರೇಪ್: ಇಬ್ಬರು ಸಿಬ್ಬಂದಿ ಅರೆಸ್ಟ್

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥ ಯುವತಿಯನ್ನು ಜೈಲಿನ ಆವರಣಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಜೈಲು ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 1:30 ರ ಸುಮಾರಿಗೆ ಜೈಲಿನ ಆವರಣದಲ್ಲಿ ಈ ಘಟನೆ ನಡೆದಿದ್ದು, ಗಸ್ತು ತಂಡವು ಕಾವಲುಗಾರರನ್ನು ಬಂಧಿಸಿದೆ.

ಹರೇಶ್ವರ ಕಲಿತಾ ಮತ್ತು ಗಜೇಂದ್ರ ಕಲಿತಾ ಎಂದು ಗುರುತಿಸಲಾದ ಆರೋಪಿಗಳು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು, ಗುವಾಹಟಿಯ ಪಂಜಾಬರಿ ಮತ್ತು ಬೋರಗಾಂವ್ ಪ್ರದೇಶಗಳ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರೂ ಪುರುಷರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳು ಬೀದಿಯಲ್ಲಿ ಒಬ್ಬಂಟಿಯಾಗಿದ್ದು, ಆರೋಪಿಗಳು ಅದರ ಲಾಭವನ್ನು ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಪುರುಷರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಶ್ರೀಭೂಮಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಣಬ್ ಜ್ಯೋತಿ ಕಲಿತಾ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular