ತುಮಕೂರು: ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ದಿವ್ಯಾ (6) ಮೃತ ಬಾಲಕಿ. ಬೀದಿ ನಾಯಿಗಳ ದಾಳಿಗೆ ಬಾಲಕಿಯ ಕರುಳು ಹೊರಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿಯಲ್ಲಿ ಈ ಘತನೆ ನಡೆದಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳ ಹಿಂಡೊಂದು ಏಕಾಏಕಿ ದಾಳಿ ನಡೆಸಿವೆ. ಮಗುವಿನ ಕೂಗಾಟ, ಚೀರಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಿದ್ದಾರೆ. ಅಷ್ಟರಲ್ಲಿ ಬೀದಿನಾಯಿಗಳು ಬಾಲಕಿಯನ್ನು ಕಚ್ಚಿ ಕರುಳು ಹೊರಬರುವಂತೆ ಎಳೆದಾಡಿಡಿವೆ. ಬಾಲಕಿಯನ್ನು ಕೂಡಲೇ ತಿಪಟೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.