ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮಲ್ಲೇಶ್ವರಂ ಹಾಗೂ ರಾಜಾಜಿನಗರದ ಇಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಮಲ್ಲೇಶ್ವರಂನಲ್ಲಿ 45 ವರ್ಷದ ವ್ಯಕ್ತಿಗೆ ಕೋವಿಡ್ ಪಾಸ್ಟಿವ್ ಬಂದಿದೆ. ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ಟ್ರಾವಲ್ ಹಿಸ್ಟ್ರಿ ಇಲ್ಲದಿದ್ದರೂ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ಇಬ್ಬರನ್ನೂ ಹೋಂ ಐಸೋಲೇಷನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೋವಿಡ್ ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.