ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ನಿನ್ನೆಯಿಂದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಮೇ 27ರವರೆಗೆ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಜೊತೆಗೆ ಶಕ್ತಿ ಚಂಡಮಾರುತ ಕೂಡ ಕರಾವಳಿ ಭಾಗಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.