ದೆವನಹಳ್ಳಿ: ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.
ದಾಳಿ ವೇಳೆ 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ತಡರಾತ್ರಿ ನಡೆಯುತ್ತಿದ ರೇವ್ ಪಾರ್ಟಿಯಲ್ಲಿ ಮಾದಕ ವಸ್ತುಗಳ ಪೂರೈಕೆ ಹಾಗೂ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ದಾಲಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್, ಗಾಂಜಾ ಪತ್ತೆಯಾಗಿದೆ. ಇನ್ನು ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿಇದ್ದ 10 ಯುವತಿಯರು, 20 ಯುವಕರು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.