ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅವಘಡವೊಂದು ಸಂಭವಿಸಿದೆ. ಆಸಿಡ್ ತುಂಬಿದ್ದ ಲಾರಿಯೊಂದು ರಸ್ತೆಬದಿ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ತಮ್ಹಿನಿ ಘಾಟ್ ನಲ್ಲಿ ಆಸಿಡ್ ಲಾರಿ ಉರುಳಿ ಬಿದ್ದಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆ ಬದಿಯ ಮಣ್ಣು ಕುಸಿತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.