ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸಂಭವಿಸುತ್ತಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಸಭೆಯ ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರಸಭೆ ಕಾಂಪೌಂಡ್ ಕುಸಿದು ಬಿದ್ದಿದ್ದು, ಮೂರು ಆಟೋ ರಿಕ್ಷಾಗಳು ಸಖಂಗೊಂಡಿವೆ. ಆಟೋದಲ್ಲಿ ಯಾರೂ ಇರಲಿಲ್ಲ. ಹಾಗಾಗಿ ಅದೃಷ್ಟವಶಾತ್ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಜೆಸಿಬಿ ಆಗಮಿಸಿದ್ದು, ಮಣ್ಣು ತೆರವು ಕಾರ್ಯ ನಡೆಸಲಾಗಿದೆ. ಕಾಂಪೌಂಡ್ ಕುಸಿದ ಪರಿಣಾಮ ಅಕ್ಕಪಕ್ಕದ ಕಟ್ಟಡಕ್ಕೂ ಹಾನಿಯಾಗಿದೆ.