BREAKING: ಕೇರಳದಲ್ಲಿ ಮುಂಗಾರು ಮಳೆ: ಪ್ರಕ್ಷುಬ್ಧಗೊಂಡ ಕಡಲು: ಅರಬ್ಬಿ ಸಮುದ್ರದಲ್ಲಿ ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಅಲೆಗಳು

ಈ ಬಾರಿ ಅವಧಿಗೂ ಮುನ್ನವೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಗಾರು ಪ್ರವೇಶ ಹಿನ್ನೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದೆ.

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರ ತೀರದ ಜನರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ನಡುವೆ ಕೇರಳ, ತಮಿಳುನಾಡು, ಕರ್ನಾಟಕ , ಪುದುಚೆರಿಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಮಳೆಯಾಗುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರೆ, ಉತ್ತರ ಭಾರತದ ರಾಜ್ಯಗಳಲ್ಲಿಯೂ ವ್ಯಾಪಕ ಮಾಲೆಯಾಗುತ್ತಿದೆ. ದಕ್ಷಿಣದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯ ಅಬ್ಬರ ಜೋರಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read