HomeLatest NewsBIG NEWS: ಬೆಟ್ಟಿಂಗ್ ಇಲ್ಲದೆ ಇಸ್ಪೀಟ್ ಆಡುವುದು ನೈತಿಕವಾಗಿ ತಪ್ಪಲ್ಲ...! ಸುಪ್ರೀಂ ಕೋರ್ಟ್ ತೀರ್ಪು

BIG NEWS: ಬೆಟ್ಟಿಂಗ್ ಇಲ್ಲದೆ ಇಸ್ಪೀಟ್ ಆಡುವುದು ನೈತಿಕವಾಗಿ ತಪ್ಪಲ್ಲ…! ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಬೆಟ್ಟಿಂಗ್ ಉದ್ದೇಶವಿಲ್ಲದೆ ಇಸ್ಪೀಟ್ ಆಡುವುದು ನೈತಿಕವಾಗಿ ತಪ್ಪಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಕರ್ನಾಟಕದ ವ್ಯಕ್ತಿಯೊಬ್ಬರ ಪ್ರಕರಣದ ತೀರ್ಪಿನ ವೇಳೆ ಈ ಬಗ್ಗೆ ಸುಪ್ರೀಂ ಕೋರ್ಟ್ ತಿಳಿಸಿದೆ. ಸರ್ಕಾರಿ ಪಿಂಗಾಣಿ ಕಾರ್ಖಾನೆ ನೌಕರರ ವಸತಿ ಸಹಕಾರ ಸಂಘದ ನಿರ್ದೇಶಕರ ಮಂಡಳಿಗೆ ಆಯ್ಕೆಯಾಗಿದ್ದ ಹನುಮಂತರಾಯಪ್ಪ ವೈ.ಎಸ್. ಅವರು ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದರು. ಅವರಿಗೆ 200 ರೂ. ದಂಡ ವಿಧಿಸಲಾಗಿತ್ತು,

ಇದರ ಬೆನ್ನಲ್ಲೇ ಹನುಮಂತರಾಯಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು, ಅವರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಚುನಾವಣೆಯಲ್ಲಿ ಅವರ ವಿರುದ್ಧ ಸೋತಿದ್ದ ಬಿ. ರಂಗನಾಥ್ ಆಗ್ರಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸಹಕಾರಿ ಸಂಘಗಳ ಕಾಯ್ದೆಯ ಸೆಕ್ಷನ್ ಅಡಿ ಅವರ ಸದಸ್ಯತ್ವ ರದ್ದು ಮಾಡಲಾಗಿತ್ತು. ಹೈಕೋರ್ಟ್ ಈ ತೀರ್ಪನ್ನು ಎತ್ತಿ ಹಿಡಿದಿತ್ತು ಇದನ್ನು ಪ್ರಶ್ನಿಸಿ ಹನುಮಂತರಾಯಪ್ಪ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠವು, ಇಸ್ಪೀಟ್ ನಲ್ಲಿ ಹಲವು ರೀತಿಯಲ್ಲಿ ಆಟಗಳಿವೆ. ಪ್ರತಿಯೊಂದು ನೈತಿಕ ಅಧಃಪತನ ಒಳಗೊಂಡಿರುತ್ತದೆ ಎಂಬುದನ್ನು ಒಪ್ಪಿಕೊಳ್ಳುವುದು ಕಷ್ಟ. ವಿಶೇಷವಾಗಿ ಮನರಂಜನೆ ಅಥವಾ ಬೆಟ್ಟಿಂಗ್ ಇಲ್ಲದೇ ಇಸ್ವೀಟ್ ಆಟ ಬಡವರ ಮನರಂಜನೆಯ ಮೂಲ ಎಂದು ಸ್ವೀಕರಿಸಲಾಗುತ್ತದೆ ಎಂದಿದೆ.

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ ಹನುಮಂತರಾಯಪ್ಪ ಆಯ್ಕೆಯನ್ನು ಮಾನ್ಯ ಮಾಡಿದೆ. ಅವರ ನಿಗದಿತ ಅಧಿಕಾರವಧಿ ಪೂರ್ಣಗೊಳ್ಳುವ ತನಕ ಮಂಡಳಿಯಲ್ಲಿ ಮುಂದುವರೆಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular