ಶಿವಮೊಗ್ಗ: ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ವಿಜಯನಗರದಲ್ಲಿರುವ ಮಂಜುನಾಥ್ ರಾವ್ ಅವರ ಮನೆಗೆ ಅಸ್ಸಾಂ ಬಿಜೆಪಿ ಸರ್ಕಾರದ ಕೈಗಾರಿಕ ಸಚಿವ ಬಿಮಲ್ ಬೋರಾ ಅವರು ಭೇಟಿ ನೀಡಿ ಸಾಂತ್ವಾನ ಹೇಳಿದರು.
ಈ ವೇಳೆ ಮಂಜುನಾಥ್ ಅವರ ಪತ್ನಿ ಆರ್. ಪಲ್ಲವಿಗೆ ಅಸ್ಸಾಂ ಸರ್ಕಾರದ 5 ಲಕ್ಷ ರೂ. ಚೆಕ್ ಮತ್ತು ಸರ್ಕಾರದ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ, ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಹರಿಕೃಷ್ಣ, ಸಿ.ಹೆಚ್. ಮಾಲತೇಶ್ ಹಾಗೂ ಬಿಜೆಪಿ ಜಿಲ್ಲಾ ಖಜಾಂಚಿ ಎನ್.ಡಿ.ಸತೀಶ್ ಅವರು ಉಪಸ್ಥಿತರಿದ್ದರು.
ಮಂಜುನಾಥ್ ರಾವ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ಬಿಮಲ್ ಬೋರ ಅವರು ಪಹಲ್ಗಾಂನಲ್ಲಿ ಮೃತಪಟ್ಟ 26 ಜನರ ಕುಟುಂಬಗಳಿಗೆ ಅಸ್ಸಾಂ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ವಿತರಿಸುತ್ತಿದ್ದು, ಅಂತೆಯೇ ಮಂಜುನಾಥ್ ರಾವ್ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ನೀಡಲಾಗಿದೆ ಎಂದು ಹೇಳಿದ್ದಾರೆ.