HomeLatest NewsBIG NEWS : ರಾಜ್ಯದ ಪ್ರೌಢಶಾಲೆಯ ಸಹ ಶಿಕ್ಷಕರುಗಳಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ...

BIG NEWS : ರಾಜ್ಯದ ಪ್ರೌಢಶಾಲೆಯ ಸಹ ಶಿಕ್ಷಕರುಗಳಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯ ನಾಲ್ಕೂ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಸಲ್ಲಿಸಲು ಕೋರಿರುತ್ತಾರೆ.

ಪ್ರಸ್ತುತ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ಜೇಷ್ಠತಾ ಪಟ್ಟಿಯನ್ನು ವಿಭಾಗವಾರು ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಸಂಬಂಧ ಸಾತಕೋತ್ತರ ಪದವಿ ವಡೆದಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್ -2 ರವರ ರಾಜ್ಯ ಮಟ್ಟದ ಒಂದೇ ಜೇನ್ಮತಾ ಪಟ್ಟಿಯನ್ನು ಸಿದ್ಧಪಡಿಸುವ ಸಂಬಂಧ ದಿನಾಂಕ : 01.06.2024 ರ ಈ ಕಛೇರಿಯ ಪತ್ರದಲ್ಲಿ ಸರ್ಕಾರಕ್ಕೆ ಮಾರ್ಗದರ್ಶನ ಕೋರಲಾಗಿರುತ್ತದೆ. ದಿನಾಂಕ : 23.10.2024 ರ ಸರ್ಕಾರದ ಪತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು (inter se ) ಸಿದ್ಧಪಡಿಸುವ ಕುರಿತು ನಿರ್ದೇಶನ ನೀಡಲಾಗಿರುತ್ತದೆ.ಸರ್ಕಾರದಿಂದ ನೀಡಿದ್ದ ನಿರ್ದೇಶನಗಳಿಗೆ ಕೆಲವು ಸ್ಪಷ್ಟನೆಗಳ ಅಗತ್ಯ ಕಂಡು ಬಂದಿದ್ದರಿಂದ 24.02.2025 ರ ಪತ್ರದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ ಮಾರ್ಗದರ್ಶನ ಕೋರಿದ್ದು ಉಲ್ಲೇಖ 6 ರ ಪತ್ರಗಳಲ್ಲಿ ಮಾರ್ಗದರ್ಶನ ಸ್ವೀಕರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಲ್ಲೇಖಿತ ಸರ್ಕಾರದ ಪತ್ರಗಳಲ್ಲಿ ಪ್ರಸ್ತಾಪಿಸಿದ ನಿರ್ದೇಶನಗಳನ್ವಯ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತೆ) ನಿಯಮಗಳು, 1957. ರ ನಿಯಮಗಳನ್ವಯ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ಮಾಹಿತಿಯನ್ನು ವಿಭಾಗೀಯ ಕಛೇರಿಗಳಿಂದ ಪಡೆದು ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-2 ರವರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮಾತ್ರ ಅನ್ವಯವಾಗುವಂತೆ ಸರ್ಕಾರ ನೀಡಿದ ನಿರ್ದೇಶನದಂತೆ ಸಿದ್ಧಪಡಿಸಿ ಆಯುಕ್ತರು, ಶಾ.ಶಿ.ಇ, ನೃಪತುಂಗ ರಸ್ತೆ, ಬೆಂಗಳೂರು, ಈ ಕಛೇರಿಯ ವೆಬ್ಸೈಟ್ www.schooleducation.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ.ಪ್ರಕಟಿಸಿರುವ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ:

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular