HomeLatest NewsBIG NEWS : ರಾಜ್ಯದಲ್ಲಿ 'ಕೋವಿಡ್ ಕೇಸ್' ಹೆಚ್ಚಳ : 'ಕೊರೊನಾ ಟೆಸ್ಟ್' ಕಡ್ಡಾಯಗೊಳಿಸಿ ಆರೋಗ್ಯ...

BIG NEWS : ರಾಜ್ಯದಲ್ಲಿ ‘ಕೋವಿಡ್ ಕೇಸ್’ ಹೆಚ್ಚಳ : ‘ಕೊರೊನಾ ಟೆಸ್ಟ್’ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು : ಕೋವಿಡ್ -19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

RT-PCR & RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್ ಗಳನ್ನು FIFO (First in First Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

  1. ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  2. ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  3. ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಎಂದು ಸೂಚಿಸಿದೆ
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular