ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಕಡಲ ತೀರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಾದ್ಯಂತ ಶನಿವಾರ, ಭಾನುವಾರ ಕೂಡ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಾಯುಭಾರ ಕುಸಿತ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದೆ. ಹೀಗಾಗಿ ಮೀನುಗಾರರು ವಿಶ್ರಾಂತಿಯಲ್ಲಿದ್ದಾರೆ.
ಶನಿವಾರ, ಭಾನುವಾರ ನಿರಂತರ ಮಳೆಯಾಗಿದೆ. ಹೀಗಾಗಿ ಮುರುಡೇಶ್ವರ ಕಡಲ ತೀರಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.