ಬೆಂಗಳೂರು : ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸಿದ್ದು, ಇದರ ನಡುವೆ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಕಡೆ ಭಾರಿ ಮಳೆ ಆಗುತ್ತಿದೆ. ಮೇ 23ರಿಂದ ಮೇ 30ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ರಣಭೀಕರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದೆ.
You Might Also Like
TAGGED:ಸೈಕ್ಲೋನ್ ಎಫೆಕ್ಟ್