ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ವೈಫಲ್ಯಗಳ ಬಗ್ಗೆ ಆರೋಪ ಪಟ್ಟಿ ಎನ್ನುವ ಶೀರ್ಷಿಕೆಯಡಿ ತಪ್ಪು ಮಾಹಿತಿ, ಸುಳ್ಳು ಸಂಗತಿಗಳ ಪ್ರಚಾರ ನಡೆಸಿದೆ ಎಂದು ಆಕ್ಷೇಪಿಸಿದ ರಾಜ್ಯ ಸರ್ಕಾರ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದೆ.
ಈ ಕುರಿತಾಗಿ ಒಳಾಡಳಿತ ಇಲಾಖೆಯು ಭಾನುವಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳು ದೂರು ದಾಖಲಿಸುವಂತೆ ಅಧಿಕೃತಗೊಳಿಸಲಾಗಿದೆ.
ಬೆಂಗಳೂರಿನ 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಬಿ.ಎಸ್. ಪಾಟೀಲ್ ಮತ್ತು 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಶೈಲಜಾ ನಾಯಕ ಅವರನ್ನು ಪ್ರಕರಣ ನಿರ್ವಹಿಸಲು ನಿಯೋಜಿಸಲಾಗಿದೆ. ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕುತೂಹಲ ಮೂಡಿಸಿದೆ.