HomeLatest NewsBIG NEWS: ಇನ್ಮುಂದೆ ಸಾರ್ವಜನಿಕರಿಗೂ ವಿಧಾನಸೌಧ ಪ್ರವೇಶಕ್ಕೆ ಅವಕಾಶ: ಸರ್ಕಾರದಿಂದ ಮಹತ್ವದ ಕಾರ್ಯಕ್ರಮ

BIG NEWS: ಇನ್ಮುಂದೆ ಸಾರ್ವಜನಿಕರಿಗೂ ವಿಧಾನಸೌಧ ಪ್ರವೇಶಕ್ಕೆ ಅವಕಾಶ: ಸರ್ಕಾರದಿಂದ ಮಹತ್ವದ ಕಾರ್ಯಕ್ರಮ

ಬೆಂಗಳೂರು: ಇನ್ಮುಂದೆ ಸಾರ್ವಜನಿಕರಿಗೂ ವಿಧಾನಸೌಧ ಪ್ರವೇಶಕ್ಕೆ, ವೀಕ್ಷಣೆಗೆ ರಾಜ್ಯ ಸರ್ಕಾರ ಅವಕಾಶ ನೀಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

‘ವಿಧಾನಸೌಧ ಮಾರ್ಗದರ್ಶಿ ಪ್ರವಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದು, ಜೂನ್ 1ರಿಂದ ಆರಂಭವಾಗಲಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸದ ಮೂಲಕ ಸಾರ್ವಜನಿಕರು ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳನ್ನು ವೀಕ್ಷಿಸಬಹುದಾಗಿದೆ.

ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರು ಆನ್ ಲೈನ್ ಮೂಲಕ ಟಿಕೆಟ್ ಬುಕ್ ಮಾಡಬೇಕು. ಪ್ರತೀ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ವಿಧಾನಸೌಧ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ನಲ್ಲಿ (https//kstdc.co/activities) ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕು.

ವಿಧಾನಸೌಧ ಪ್ರವಾಸಕ್ಕೆ 16 ವರ್ಷ ಮೇಲ್ಪಟ್ಟವರಿಗೆ 50 ರೂಪಾಯಿ ಟಿಕೆಟ್ ನಿಗದಿ ಪಡಿಸಲಾಗಿದೆ.

16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ಪ್ರವೇಶ

ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಧಾನಸೌಧ ಪ್ರವಾಸಕ್ಕೆ ಅವಕಾಶ ನೀಡಲಾಗಿದೆ.

ದಿನಕ್ಕೆ ಪ್ರತಿ ಬ್ಯಾಚ್ ನಲ್ಲಿ 30 ಜನರಂತೆ 300 ಜನರಿಗೆ ಅವಕಾಶ

ವಿಧಾನಸೌಧದ ಗೇಟ್ ನಂ.3ರ ಮೂಲಕ ಪ್ರವಾಸಕ್ಕೆ ಅವಕಾಶ

ಟೂರ್ ಆರಂಭಕ್ಕೆ 20 ನಿಮಿಷ ಮುಂಚಿತವಾಗಿ ಹಾಜರಿರಬೇಕು

ಟಿಕೆಟ್ ಬುಕ್ ಮಾಡಿದವರು ಗುರುತಿನ ಚೀಟಿ ತರುವುದು ಕಡ್ದಾಯ. ನಿಗದಿತ ಸ್ಥಳಗಳಲ್ಲಿ ಮಾತ್ರ ಫೋಟೋ ತೆಗೆಯಲು ಅವಕಾಶ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular