ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video

ಬಿಹಾರದ ರೋಹ್ತಾಸ್ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ಭಾನುವಾರ ಬೆಳಿಗ್ಗೆ (ಮೇ 25) ನಡೆದ ವಿಚಿತ್ರ ಅಪಘಾತವೊಂದರಲ್ಲಿ ಮಾರುತಿ ಸುಜುಕಿ ಆಲ್ಟೋ ಕಾರು ಐದು ಬಾರಿ ಪಲ್ಟಿಯಾದರೂ, ಅದರಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋಲ್ಕತ್ತಾದಿಂದ ವಾರಣಾಸಿಗೆ ಹೊರಟಿದ್ದ ಈ ಕಾರು, ವೇಗವಾಗಿ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಹಲವು ಬಾರಿ ಪಲ್ಟಿಯಾಗಿ, ಕೊನೆಗೆ ಬಿಹಾರ ಹೆದ್ದಾರಿಯ ಪಕ್ಕದಲ್ಲಿ ಎಡಭಾಗಕ್ಕೆ ತಿರುಗಿ ನಿಂತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ತೀವ್ರ ಆಘಾತಕಾರಿಯಾಗಿದ್ದು, ಅಪಘಾತದ ಭೀಕರತೆಯನ್ನು ತೋರಿಸುತ್ತದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಕಾರನ್ನು ನೇರಗೊಳಿಸಲು ಸಹಾಯ ಮಾಡಿದ್ದಾರೆ. ಅಲ್ಲದೆ, ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಅದೃಷ್ಟವಶಾತ್, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಘಟನೆಯು ರಸ್ತೆ ಸುರಕ್ಷತೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read