ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಸಂಭವಿಸಿದ್ದು. ಭಾರಿ ಮಳೆಗೆ ಮನೆ ಗೋಡೆ ಕುಸಿದುಬಿದ್ದು 3 ವರ್ಷದ ಮಗು ಸಾವನ್ನಪ್ಪಿದೆ.
ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಲಗಿದ್ದಾಗ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಕೀರ್ತಿಲಾ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TAGGED:ಘೋರ ದುರಂತ