HomeLatest NewsBREAKING : ರಾಜ್ಯದಲ್ಲಿ 'ಕೊರೊನಾ ಕೇಸ್' ಹೆಚ್ಚಳ : 'ಕೋವಿಡ್ ಟೆಸ್ಟ್' ಗಳ ಸಂಖ್ಯೆ ಹೆಚ್ಚಿಸಿ...

BREAKING : ರಾಜ್ಯದಲ್ಲಿ ‘ಕೊರೊನಾ ಕೇಸ್’ ಹೆಚ್ಚಳ : ‘ಕೋವಿಡ್ ಟೆಸ್ಟ್’ ಗಳ ಸಂಖ್ಯೆ ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ.!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣಾ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್ಗಳನ್ನು FIFO (First-In-First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್ 19 ರ ಕಿಟ್ /ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

  1. ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  2. ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
  3. ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಎಂದು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular