HomeLatest Newsಮತ್ತೊಂದು ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ವೈದ್ಯ ಸ್ಥಳದಲ್ಲೇ ದುರ್ಮರಣ

ಮತ್ತೊಂದು ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ವೈದ್ಯ ಸ್ಥಳದಲ್ಲೇ ದುರ್ಮರಣ

ಕೋಲಾರ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿವೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೈದ್ಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.

ಕೃಷ್ಣ ಜಗನ್ ಮೃತ ವೈದ್ಯ. ಆಂಧ್ರಪ್ರದೇಶ ಮೂಲದ ಕೃಷ್ಣ ಜಗನ್ ಅನಂತಪುರಂ ನಿಂದ ಕುಪ್ಪ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ಕಾರಿಡಾರ್ ವೇಯಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಅತಿಯಾದ ವೇಗವೇ ಅಪಘತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಬಂಗಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular