HomeLatest Newsಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ: ಆನ್ ಲೈನ್ ನಲ್ಲಿ ಟಿಕೆಟ್ ಬುಕ್...

ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ: ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿಕೊಳ್ಳಿ

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.

ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದ್ದು, ಇದಕ್ಕೆ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ದಿನಕ್ಕೆ 300 ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಅವಕಾಶವಿರಲಿದೆ.

ಅಧಿಕೃತ ಕೆಎಸ್‌ಟಿಡಿಸಿ ವೆಬ್‌ಸೈಟ್‌ ಅಥವಾ ದೃಢೀಕೃತ ಟಿಕೆಟ್‌ ಸೇವಾ ಪೂರೈಕೆದಾರರ ವೇದಿಕೆಯಲ್ಲಿ ಟಿಕೆಟ್‌ ಬುಕ್ಕಿಂಗ್‌ ಕಡ್ಡಾಯ. ಸ್ಥಳದಲ್ಲಿ ಬುಕ್ಕಿಂಗ್‌ ಮಾಡಲು ಬಯಸುವವರು ಗೇಟ್‌ -3ರಲ್ಲಿರುವ ಕೆಎಸ್‌ಟಿಡಿಸಿ ಕೌಂಟರ್‌ನಲ್ಲಿ ಟಿಕೆಟ್‌ ಲಭ್ಯತೆ ಇದ್ದರೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular