HomeLatest NewsBREAKING: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಹತ್ವದ ಕ್ರಮ: ಸೋಂಕಿತ ಮಕ್ಕಳಿಗೆ ರಜೆ: ಕೇಂದ್ರದ ಮಾರ್ಗಸೂಚಿ ನಂತರ...

BREAKING: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಹತ್ವದ ಕ್ರಮ: ಸೋಂಕಿತ ಮಕ್ಕಳಿಗೆ ರಜೆ: ಕೇಂದ್ರದ ಮಾರ್ಗಸೂಚಿ ನಂತರ ಲಸಿಕೆ, ವೈದ್ಯರ ರಜೆ ರದ್ದು: ಮಾಸ್ಕ್ ಧರಿಸಲು ಸೂಚನೆ

ಬೆಂಗಳೂರು: ಕೇಂದ್ರದಿಂದ ಮಾರ್ಗಸೂಚಿ ಬಂದ ನಂತರ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಭಿಪ್ರಾಯ ಪಡೆದುಕೊಂಡು ಲಸಿಕೆ ನೀಡಲಾಗುವುದು. ಕೊರೋನಾ ಲಕ್ಷಣ ಇರುವ ಮಕ್ಕಳಿಗೆ ರಾಜ್ಯ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿಗಳು ಕೂಡ ಗಮನಹರಿಸಬೇಕು. ಟೆಸ್ಟಿಂಗ್ ವಿಚಾರದಲ್ಲಿ ಹಳೆಯ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಲಸಿಕೆ ನೀಡುವ ಬಗ್ಗೆ ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ಸಿಎಂ ಹೇಳಿದ್ದಾರೆ. ವೈದ್ಯರು, ಸಿಬ್ಬಂದಿಗೆ ರಜೆ ಮೇಲೆ ಹೋಗದಂತೆ ಸೂಚನೆ ನೀಡಲಾಗಿದೆ. ಎಲ್ಲರಿಗೂ ಕೊರೋನಾ ಟೆಸ್ಟ್ ಮಾಡುವ ಅಗತ್ಯವಿಲ್ಲ. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ಟೆಸ್ಟ್ ಮಾಡುತ್ತೇವೆ. ವಿದೇಶದಿಂದ ಬಂದವರಿಗೆ ಯಾವುದೇ ಟೆಸ್ಟಿಂಗ್ ಇರಲ್ಲ. ಕೋವಿಡ್ ನಿಯಂತ್ರಣಕ್ಕೆ ನಾವು ತಯಾರಾಗಿದ್ದೇವೆ. ಬಾಣಂತಿಯರು, ಮಕ್ಕಳು, 50 ವರ್ಷ ಮೇಲ್ಪಟ್ಟವರು, ವಿವಿಧ ಕಾಯಿಲೆ ಇರುವವರು ಮಾಸ್ಕ್ ಧರಿಸಬೇಕು ಎಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular