HomeLatest NewsBIG NEWS: ಟೆರ್ರರಿಸಂ ಅನ್ನೇ ಟೂರಿಸಂ ಎಂದು ಭಾವಿಸಿದ ಪಾಕಿಸ್ತಾನ ಜಗತ್ತಿಗೆ ದೊಡ್ಡ ಬೆದರಿಕೆ: ಪ್ರಧಾನಿ...

BIG NEWS: ಟೆರ್ರರಿಸಂ ಅನ್ನೇ ಟೂರಿಸಂ ಎಂದು ಭಾವಿಸಿದ ಪಾಕಿಸ್ತಾನ ಜಗತ್ತಿಗೆ ದೊಡ್ಡ ಬೆದರಿಕೆ: ಪ್ರಧಾನಿ ಮೋದಿ

ಭುಜ್(ಗುಜರಾತ್): ಪಾಕಿಸ್ತಾನದಂತಹ ದೇಶ ಭಯೋತ್ಪಾದನೆಯನ್ನು ಪ್ರವಾಸೋದ್ಯಮ ಎಂದು ಭಾವಿಸುತ್ತದೆ, ಇದು ಜಗತ್ತಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭುಜ್‌ ನಲ್ಲಿ ನಡೆದ ಇಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, “ಪಾಕಿಸ್ತಾನದಂತಹ ದೇಶವು ಭಯೋತ್ಪಾದನೆಯನ್ನು ಪ್ರವಾಸೋದ್ಯಮವೆಂದು ಭಾವಿಸುತ್ತದೆ” ಮತ್ತು ಅದು ಜಗತ್ತಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಿಒಜೆಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿದ ಆಪರೇಷನ್ ಸಿಂಧೂರ್ ಅನ್ನು ಉಲ್ಲೇಖಿಸಿ, ಇದು ಮಾನವೀಯತೆಯನ್ನು ಉಳಿಸುವ ಮತ್ತು ಭಯೋತ್ಪಾದನೆಯನ್ನು ಕೊನೆಗೊಳಿಸುವ ಧ್ಯೇಯವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಪ್ರವಾಸೋದ್ಯಮದಲ್ಲಿ ನಂಬಿಕೆ ಇಡುತ್ತದೆ. ಪ್ರವಾಸೋದ್ಯಮ ಜನರನ್ನು ಒಟ್ಟುಗೂಡಿಸುತ್ತದೆ. ಆದರೆ ಪಾಕಿಸ್ತಾನದಂತಹ ದೇಶವು ಭಯೋತ್ಪಾದನೆಯನ್ನು ಪ್ರವಾಸೋದ್ಯಮ ಎಂದು ಭಾವಿಸುತ್ತದೆ. ಇದು ಜಗತ್ತಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧ ನಮ್ಮ ನೀತಿ ಶೂನ್ಯ ಸಹಿಷ್ಣುತೆ. ಆಪರೇಷನ್ ಸಿಂದೂರ್ ನಮ್ಮ ನೀತಿಯನ್ನು ಸ್ಪಷ್ಟಪಡಿಸಿತು. ನಮ್ಮನ್ನು ರಕ್ತಸಿಕ್ತಗೊಳಿಸುವ ಯಾರೇ ಆದರೂ ಇದೇ ರೀತಿಯ ಪ್ರತಿಕ್ರಿಯೆಯನ್ನು ನೋಡುತ್ತಾರೆ. ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ. ಆಪರೇಷನ್ ಸಿಂದೂರ್ ಮಾನವೀಯತೆಯನ್ನು ಉಳಿಸುವ ಮತ್ತು ಭಯೋತ್ಪಾದನೆಯನ್ನು ಕೊನೆಗೊಳಿಸುವ ಒಂದು ಧ್ಯೇಯವಾಗಿದೆ. ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತದೆಯೇ ಎಂದು ನಾವು 15 ದಿನಗಳವರೆಗೆ ಕಾದೆವು, ಆದರೆ ಅವರು ಏನೂ ಮಾಡದಿದ್ದಾಗ, ನಾನು ನಮ್ಮ ಸಶಸ್ತ್ರ ಪಡೆಗಳಿಗೆ ಮುಕ್ತ ಹಸ್ತ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular