ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಇನ್ನೂ ಆರು ದಿನಗಳ ಕಾಲ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜೂನ್ 1ರವರೆಗೆ ಆರೆಂಜ್ ಘೋಷಿಸಲಾಗಿದೆ.
ಇಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.
ಬುಧವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆಯಾದರೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 
			 
		 
		 
		 
		 Loading ...
 Loading ... 
		 
		 
		