ಬಡ ರೋಗಿಗಳಿಗೆ ಗುಡ್ ನ್ಯೂಸ್: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ(KCMMR) ಕಾರ್ಪಸ್‌ ಹಣ 110 ಕೋಟಿ ರೂ.ಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ.

ಈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್‌ಸ್‌ ಅಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗಳು ಸೂಪರ್‌ ಸ್ಪೆಷಾಲಿಟಿ ಅಡಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ(KCMMR) ಅನುದಾನಕ್ಕೆ ಬೇಡಿಕೆ ಸಲ್ಲಿಸಿರುತ್ತವೆ.

ಮಾನವೀಯತೆ ದೃಷ್ಟಿಯಿಂದ ಬಡತನ ರೇಖೆಗಿಂತ (ಬಿಪಿಎಲ್‌) ಕೆಳಗಿರುವ ಫಲಾನುಭವಿಗಳನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿಕೊಂಡಿರುವ ಮಾನದಂಡಗಳನ್ನು ಹೊರರಾಜ್ಯಗಳ ಬಡ ರೋಗಿಗಳಿಗೂ ಅನ್ವಯಿಸಿ ಕೊಂಡು ನಮ್ಮ ರಾಜ್ಯದ ರೋಗಿಗಳಿಗೆ ಮೊದಲ ಆದ್ಯತೆ ಆದರೂ ಹೊರ ರಾಜ್ಯದ ಬಡ ರೋಗಿಗಳನ್ನು ಸಹ ಒಳಪಡಿಸಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಆಧಾರ್‌ ಮಾಹಿತಿಯನ್ನು ಪರಿಗಣಿಸಿ, ಅಳವಡಿಸಿಕೊಳ್ಳಲಾಗಿರುತ್ತದೆ.

2023-24ನೇ ಸಾಲಿನಲ್ಲಿ 30,296 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ 2024-25ನೇ ಸಾಲಿನಲ್ಲಿ 27,442 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

ಒಟ್ಟಾರೆಯಾಗಿ 2023-24 ಮತ್ತು 2024-25ನೇ ಸಾಲುಗಳಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನದಿಂದ 57,738 ಬಡ ರೋಗಿಗಳು ಪ್ರಯೋಜನ ಪಡೆದಿರುತ್ತಾರೆ.

2025-26ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ ಬಂದಿರುವ ರೂ.9.30 ಕೋಟಿಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read