HomeLatest Newsದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆ: ಸಿವಿಲ್ ಕೇಸ್ ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆ: ಸಿವಿಲ್ ಕೇಸ್ ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ಬೆಂಗಳೂರು: ನ್ಯಾಯದಾನ ಪದ್ಧತಿ ಸುಧಾರಣೆ ತರುವ ಉದ್ದೇಶದಿಂದ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಸಿವಿಲ್ ಕೇಸ್ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಲಾಗಿದೆ. ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿವಿಲ್ ಪ್ರಕ್ರಿಯ ಸಂಹಿತೆ ಕಾನೂನು ಜಾರಿಗೊಳಿಸಲಾಗುತ್ತಿದೆ

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ನಿರ್ದಿಷ್ಟ ಸಮಯ ಪಾಲನೆಯೊಂದಿಗೆ ಸೇವೆಯಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಪಿಸಿ(ಸಿವಿಲ್ ಪ್ರಕ್ರಿಯ ಸಂಹಿತೆ) ರಾಜ್ಯಕ್ಕೆ ಹೊಂದಿಕೆಯಾಗುವಂತೆ ಕೆಲವು ತಿದ್ದುಪಡಿ ಮಾಡಿದ್ದು, ರಾಷ್ಟ್ರಪತಿಗಳ ಅಂಕಿತ ದೊರೆತಿದೆ. ಈ ಐತಿಹಾಸಿಕ ತಿದ್ದುಪಡಿಯನ್ನು ದೇಶದಲ್ಲಿಯೇ ಮೊದಲು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳ ವಿಳಂಬಕ್ಕೆ ಮುಕ್ತಿ ನೀಡುವ ತಿದ್ದುಪಡಿ ಕಾನೂನನ್ನು ಕೂಡಲೇ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ದಶಕಗಳ ಕಾಲ ಬಾಕಿ ಇರುವ ಪ್ರಕರಣಗಳಿಗೆ ಮುಕ್ತಿ ನೀಡಲು ಯಶಸ್ವಿ ಕ್ರಮ ಕೈಗೊಳ್ಳಲಾಗಿದೆ. ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾಗಿ ಪ್ರಯತ್ನಿಸಬೇಕು. ಎರಡು ತಿಂಗಳೊಳಗೆ ರಾಜೀ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಲ್ಲಿ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು.

ನ್ಯಾಯಾಲಯಗಳ ವಿಚಾರಣೆಯಲ್ಲಿ ವಿಳಂಬವಾಗದಂತೆ ಇಂತಹ ಕಾನೂನು ಜಾರಿಗೊಳಿಸಲಾಗುತ್ತಿದೆ. ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ ತಾರ್ಕಿಕ ಅಂತ್ಯ ಕಾಣಲು ಇದು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular