ಹಾಸನ: ರಾಜ್ಯದಲ್ಲಿ ಮಳೆ ಅವಾಂತರಕ್ಕೆ ಮತ್ತಿಬ್ಬರು ಬಲಿಯಾಗಿದ್ದಾರೆ. ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಾರ್ ನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ.
ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಹೇಳಲಾಗಿದೆ.
ಬೆಂಗಳೂರು ಮೂಲದ ಟ್ರಾವೆಲ್ಸ್ ವೊಂದರ ಮೂಲಕ ಬಾಡಿಗೆ ಕಾರ್ ನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಧನಂಜಯ್ ಮತ್ತು ರಾಜಶೇಖರ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.