ಡಿಜಿಟಲ್ ಡೆಸ್ಕ್ : ಪಾರು ಸೀರಿಯಲ್ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ (47) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ನಟ ಶ್ರೀಧರ್ ನಾಯಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.
ಅವರ ಪಾರ್ಥೀವ ಶರೀರವು ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಬೆಳಿಗ್ಗೆ 11 ಘಂಟೆಯವರೆಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಜೀ ಕನ್ನಡದ ‘ಪಾರು’ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೇ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಹಲವು ಕಲಾವಿದರು ಕೂಡ ಆರ್ಥಿಕ ಪರಿಹಾರದ ವ್ಯವಸ್ಥೆ ಮಾಡಿದ್ದರು.