ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.





TAGGED:ಬಿಸಿಯೂಟ ಸಿಬ್ಬಂದಿ