ಕೊಡಗು : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಮರದ ಕೊಂಬೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ವಿಷ್ಣು ಬೆಳ್ಯಪ್ಪ (64) ಮೃತರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಘಟನೆ ನಡೆದಿದೆ.
ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ವಿಷ್ಣು ಬೆಳ್ಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.