HomeLatest NewsBIG NEWS: ದಕ್ಷಿಣ ಕನ್ನಡದಲ್ಲಿ ಮುಂದುವರೆದ ಮಳೆಯ ಅಬ್ಬರ: ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ...

BIG NEWS: ದಕ್ಷಿಣ ಕನ್ನಡದಲ್ಲಿ ಮುಂದುವರೆದ ಮಳೆಯ ಅಬ್ಬರ: ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಮಳೆ ಅವಾಂತರದಿಂದಾಗಿ ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರಗಳಿಗೆ, ಕಾಲೇಜುಗಳಿಗೆ ಹೋಗುವುದೂ ದುಸ್ತರವಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 27 ಹಾಗೂ 28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುರುಗನ್ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿಯೂ ಒಂದೇ ಸಮನೇ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ್ ರೆಡ್ಡಿ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular