HomeLatest NewsBREAKING : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 'ಕೋವಿಡ್ ಟೆಸ್ಟ್' ಆರಂಭ : ಸೋಂಕಿತರಿಗಾಗಿ 50 ಬೆಡ್...

BREAKING : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ‘ಕೋವಿಡ್ ಟೆಸ್ಟ್’ ಆರಂಭ : ಸೋಂಕಿತರಿಗಾಗಿ 50 ಬೆಡ್ ಮೀಸಲು

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಿದ್ದು, ಸೋಂಕಿತರಿಗಾಗಿ 50 ಬೆಡ್ ಮೀಸಲಿಡಲಾಗಿದೆ.

ಹೌದು, ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಟೆಸ್ಟ್ ಆರಂಭವಾಗಿದೆ. ಬೆಂಗಳೂರು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲಾಗಿದೆ. : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಿದ್ದು, ಸೋಂಕಿತರಿಗಾಗಿ 50 ಬೆಡ್ ಮೀಸಲಿಡಲಾಗಿದೆ. ಆಕ್ಸಿಜನ್ ಸಪೋರ್ಟ್ ಇರುವಂತಹ ಐಸಿಯು ಬೆಡ್ ಸೇರಿದಂತೆ 50 ಬೆಡ್ ಮೀಸಲಿಡಲಾಗಿದೆ.

ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಸೋಂಕಿನ ಕುರಿತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಲಾಯಿತು.ಇದು ಕೋವಿಡ್ ರೂಪಾಂತರಿ ಒಮಿಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಸಾರ್ವಜನಿಕರು ಆತಂಕ ಪಡುವ ಸ್ಥಿತಿ ಬಂದಿಲ್ಲವಾದರೂ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ. ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ. ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular