ಬೆಂಗಳೂರು: ಬೆಂಗಳೂರಿನ ರಸ್ತೆಬದಿಗಳಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಗೃಹ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಗೃಹ ಸಚಿವ ಪರಮೇಶ್ವರ್, ವಾಹನ್ಗಳ ಟೋಯಿಂಗ್ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿದೆ ಎಂದರು.
ಟೋಯಿಂಗ್ ನಿಂದ ಸಾರ್ವಜನಿಕರಿಗೆ ಉಪಯೋಗವಾಗುವುದಾದರೆ ಮತ್ತೆ ಜಾರಿಗೆ ತರುತ್ತೇವೆ. ಆದರೆ ಅದು ಸಾರ್ವಜನಿಕರಿಗೆ ತೊಂದರೆ ಆಗುವುದಾದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗುವಂತಿರಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.