HomeLatest NewsBREAKING : ರಾಜ್ಯದಲ್ಲಿ ಎಲ್ಲರೂ 'ಮಾಸ್ಕ್' ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ : CM...

BREAKING : ರಾಜ್ಯದಲ್ಲಿ ಎಲ್ಲರೂ ‘ಮಾಸ್ಕ್’ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ. ಕೆಮ್ಮು, ಶೀತ , ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ. ಕೇಂದ್ರ ಸರ್ಕಾರ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಎಆರ್ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ಜನರಿಗೆ ಅನುಕೂಲವಾಗುವಂತೆ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು. ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು. ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ದವಾಗಿ ಇರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು. ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular