ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾ ಭೀತಿ ಮತ್ತಷ್ಟು ಹೆಚ್ಚಗಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಕೊರೊನಾ ಆತಂಕ ಸೃಷ್ಟಿಯಾಗಿದೆ. ಆದರೆ ಶಾಲೆಗಳಿಗೆ ಸದ್ಯಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ ಎಂದರು.
ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಸ್ಥಿತಿಯಲ್ಲಿ ಶಾಲೆಗಳಿಗೆ ಯಾವುದೇ ಗೈಡ್ ಲೈನ್ ಪ್ರಕಟಿಸಿಲ್ಲ. ಆದರೆ ಎಚ್ಚರಿಕೆ, ಮುಂಜಾಗೃತಾ ಕ್ರಮಗಳನ್ನು ವಹಿಸಲು ಸೂಚನೆ ನೀಡಲಾಗಿದೆ. ಅರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಹಾಗೂ ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯನ್ನು ನಾವು ಅನುಸರಿಸುತ್ತೇವೆ. ಇಲ್ಲಿಯವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಮಾಸ್ಕ್ ಧರಿಸುವುದು ಒಳ್ಳೆಯದು. ಆರೋಗ್ಯದಲ್ಲಿ ವ್ಯತ್ಯಾಸವಿರುವ ಮಕ್ಕಳು ಶಾಲೆಗೆ ಬರುವುದು ಬೇಡ ಎಂದು ನಿರ್ಧಾರವಾಗಿದೆ. ಶಿಕ್ಷಕರು, ಮಕ್ಕಳು, ಪೋಷಕರು ಎಚ್ಚರಿಕೆವಹಿಸುವುದು ಮುಖ್ಯ ಎಂದು ಹೇಳಿದರು.