ಕೊಚ್ಚಿ: ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಖ್ಯಾತ ಮಲಯಾಳಂ ನಟ ಉನ್ನಿ ಮುಕುಂದನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮತ್ತೋರ್ವ ನಟನ ಸಿನಿಮಾ ವಿಮರ್ಷೆ ಮಾಡಿದ್ದಕ್ಕೆ ನಟ ಉನ್ನಿ ಮುಕುಂದನ್ ನನ್ನ ಕೆನ್ನೆಗೆ ಹೊಡೆದಿದ್ದಾರೆ. ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮ್ಯಾನೇಜರ್ ವಿಪಿನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಕಾಕ್ಕನಾಡು ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಸೋಮವಾರ ಈ ಘಟನೆ ನಡೆದಿದೆ ಎಂದು ದೂರುನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಮುಕುಂದನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.